ನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

0
43

ಬೆಳಗಾವಿ: ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ಮಹಾದೇವ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತ ಬಾಲಕಿಯಿಂದ ಈ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರಕಿದೆ.
ಈ ಕುರಿತಂತೆ ಅಪ್ರಾಪ್ತ ಬಾಲಕಿಯ ಪೋಷಕರಿಂದ ವಿಡಿಯೋ ಹೇಳಿಕೆ ಬಿಡುಗಡೆಯಾಗಿದ್ದು, ಅವರ ಹೇಳಿಕೆಯ ದೃಶ್ಯವು ಈ ಪ್ರಕರಣಕ್ಕೆ ಹೊಸ ತಿರುವು ನೀಡಲಿದೆ, ಇನ್ನು ಆ ವಿಡಿಯೋದಲ್ಲಿ ಮಾತನಾಡಿರುವ ಪೋಕ್ಸೋ ಪ್ರಕರಣ ದಾಖಲಿಸಿರುವ ಅಪ್ರಾಪ್ತ ಬಾಲಕಿಯ ಪೋಷಕರು ಅವರು ಬೆಳಗಾವಿಯಿಂದ ಬಾಳೇಕುಂದ್ರಿ ಬರುತ್ತಿದ್ದರು. ಟಿಕೆಟ್ ಸಂಬಂಧ ಆಗಿರೋ ಜಗಳ ಕನ್ನಡ, ಮರಾಠಿ ಎಂದು ಪ್ರಚಾರ ಮಾಡ್ತಿದ್ದಾರೆ. ನಾವು ಕನ್ನಡದ ಅಭಿಮಾನಿಗಳು, ಜಾತಿ ಭೇದಬಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡ್ತಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ‌ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಿ. ಕೇಸ್ ಸ್ವ ಇಚ್ಛೆಯಿಂದ ವಾಪಸ್ ಪಡೆಯುತ್ತೇವೆ ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದಿದ್ದಾರೆ.

Previous articleನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣ: ಸಿಪಿಐ ತಲೆದಂಡ
Next articleಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ ವಿಜಯಪುರ ಜಿಲ್ಲೆಯ ಇಬ್ಬರ ಸಾವು