ನೀಟ್ ಪರೀಕ್ಷೆ, ಒಂದು ರಾಷ್ಟ್ರ ಒಂದು ಚುನಾವಣೆ ನೀತಿ ವಿರುದ್ಧ ನಿರ್ಣಯ: ಉಭಯ ಸದನಗಳಲ್ಲೂ ಅಂಗೀಕಾರ

0
12

ಬೆಂಗಳೂರು: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ವಿಧಾನಪರಿಷತ್​ನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು. ಇನ್ನು ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಹಗರಣದ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರಾಜ್ಯದಲ್ಲಿ ರದ್ದು ಮಾಡಬೇಕು ಎಂದು ಕೋರಿ ನಿರ್ಣಯ ಮಂಡಿಸಲಾಯ್ತು. ನೀಟ್ ಪರೀಕ್ಷೆ ವ್ಯವಸ್ಥೆ ಗ್ರಾಮೀಣ ಭಾಗದ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಹಿನ್ನಡೆ ಆಗುತ್ತಿದೆ. ನೀಟ್ ವ್ಯವಸ್ಥೆ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿ ನಿರ್ಣಯ: ವಿಧಾನಪರಿಷತ್​ನಲ್ಲಿ ಸಿಎಂ ಸಿದ್ದರಾಮಯ್ಯ ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ​ನಿರ್ಣಯ ಮಂಡಿಸಿದರು.
ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿಯಾಗಿದೆ. ಇದು ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ. ಭದ್ರತೆ ಖಚಿತ ಪಡಿಸುವುದು, ಚುನಾವಣಾ ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವು ಆಯಾಮದಲ್ಲಿ ಇದು ಗಂಡಾಂತರವಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂಬ ನಿರ್ಣಯ ಪಾಸ್ ಮಾಡಲಾಯಿತು.

Previous articleಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Next articleಮುನ್ನೆಲೆಗೆ ಬಂದ ಬುಡಾ ಹಗರಣ