ನೀರಿನ ಟ್ಯಾಂಕರ್‌ಗಳ ಮೇಲೆ ಚುನಾವಣಾ ಆಯೋಗ ನಿಗಾ

0
14

ಬೆಂಗಳೂರು: ಮಾದರಿ ನೀತಿ ಸಂಹಿತೆ ಘೋಷಣೆಯಾದ ನಂತರ ರಾಜ್ಯದಲ್ಲಿ ನೀರಿನ ಟ್ಯಾಂಕರ್‌ಗಳ ಚಲನವಲನಗಳ ಮೇಲೆ ಚುನಾವಣಾ ಆಯೋಗವು ತೀವ್ರ ನಿಗಾ ಇಡಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಗ್ರಾಮಗಳು, ಪಟ್ಟಣಗಳಲ್ಲಿ ನೀರು ಸರಬರಾಜಿನಲ್ಲಿ ತೀವ್ರ ಕೊರತೆಯ ಮಧ್ಯೆ ರಾಜ್ಯ ಸರ್ಕಾರ ಗ್ರಾಮೀಣ ಭಾಗದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ. ಮತದಾರರನ್ನು ಸೆಳೆಯುವ ಉದ್ದೇಶದಿಂದ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿ ನೀರು ಸರಬರಾಜು ಮಾಡುವುದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.
ನೀರಿನ ಟ್ಯಾಂಕರ್‌ಗಳ ಬಗ್ಗೆ ರಾಜ್ಯ ಸರ್ಕಾರವು ನಿಯಂತ್ರಣ ಹೊಂದಿದ್ದರೂ, ಚುನಾವಣಾ ಆಯೋಗವು ನೀರಿನ ಟ್ಯಾಂಕರ್‌ಗಳ ಮೇಲೆ ನಿಗಾ ಇಡುತ್ತದೆ. ರಾಜಕೀಯ ಪಕ್ಷವು ಒದಗಿಸುವ ಸೌಲಭ್ಯಗಳನ್ನು ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Previous articleಬಘೇಲ್ ಕೊರಳಿಗೆ ಬೆಟ್ಟಿಂಗ್ ಉರುಳು
Next articleಕಳ್ಳತನದ ಆರೋಪ ವಿದ್ಯಾರ್ಥಿನಿ ಆತ್ಮಹತ್ಯೆ