ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

0
17

ಪಂಚಕುಲ: ಸತತ ಎರಡನೇ ಬಾರಿಗೆ ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹರಿಯಾಣದ ಪಂಚಕುಲದ ಸೆಕ್ಟರ್ 5ರ ಪರೇಡ್ ಗ್ರೌಂಡ್‌ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನೂತನ ಸಿಎಂ ನಯಾಬ್ ಸಿಂಗ್ ಸೈನಿ ಮತ್ತು ಸಚಿವರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರ ಸಿಎಂಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Previous articleಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ
Next articleನಾಲೆಯಲ್ಲಿ ಕೊಚ್ಚಿಹೋದ ಬಾಲಕ