Home ತಾಜಾ ಸುದ್ದಿ ನೂರಾರು ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ನೂರಾರು ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

0

ಧಾರವಾಡ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣವನ್ನು ವಜಾ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಶಾಸಕ ಅಥವಾ ವಿಂದ ಬೆಲ್ಲದ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸವದತ್ತಿಯಿಂದ ಧಾರವಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಅಲ್ಲದೇ ಮುತ್ತಿಗೆ ಹಾಕಲು ಸಜ್ಜಾಗಿದ್ದರು.‌ವಿಷಯ‌ ತಿಳಿದ ಪೊಲೀಸರು ಎಲ್ಲರನ್ನು ಬಂಧಿಸಿ ಕರೆದೊಯ್ದರು.
ಮಾಜಿ ಮಹಾಪೌರ ಶಿವು ಹಿರೇಮಠ, ಮಾಜಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಶಂಕರ ಶೇಳಕೆ, ಬಸವರಾಜ ಗರಗ, ಗೀತಾ ಪಾಟೀಲ, ಪುಷ್ಪಾ ಮಜ್ಜಗಿ, ಮೋಹನ ರಾಮದುರ್ಗ ಸೇರಿದಂತೆ ಇತರರು ಇದ್ದರು.

Exit mobile version