ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಮಾಹಿತಿಗೆ ಮನವಿ

0
7

ಮಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕಳೆದ ವರ್ಷದ ಜುಲೈ ತಿಂಗಳಲ್ಲಿ ನಡೆದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಪಟ್ಟಿಯಲ್ಲಿದ್ದಾರೆ. ಇವರ ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಎನ್‌ಐಎ ತಿಳಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಆರ್. ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಎನ್‌ಐಎ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಪಟ್ಟಿಯಲ್ಲಿದ್ದಾರೆ. ಇವರ ಮಾಹಿತಿ ಇದ್ದಲ್ಲಿ ವಾಟ್ಸಾಪ್ (೯೪೯೭೭೧೫೨೯೪) ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ. ಈ ಆರೋಪಿಗಳು ಕಂಡು ಬಂದಲ್ಲಿ ಅಥವಾ ಅವರ ಇರುವಿಕೆಯ ಕುರಿತಾಗಿ ಮಾಹಿತಿ ಇದ್ದಲ್ಲಿ ನೀಡುವಂತೆ ಸಾರ್ವಜನಿಕರನ್ನು ಎನ್ ಐಎ ವಿನಂತಿಸಿದೆ. ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ
೨೦೨೨ರ ಜು. ೨೬ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಎನ್ ಐಎ ಹಲವರನ್ನು ಬಂಧಿಸಿದ್ದು, ಇನ್ನೂ ಹಲವಾರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎನ್ ಐಎ ನಿರಂತರ ತನಿಖೆ ಮುಂದುವರಿಸಿದೆ. ಹಲವು ಆರೋಪಿಗಳ ಹೆಸರಿನಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ ಬಹುಮಾನ ಘೋಷಿಸಿದೆ.

Previous articleಕೋಟಿ ವಿಷಯಾಂತರ ಮಾಡುವ ಉದ್ದೇಶದಿಂದ ಭದ್ರತಾ ಲೋಪದ ಟೂಲ್ ಕಿಟ್
Next articleಮಹಿಳೆಯ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ