ಆನೇಕಲ್: 120 ಅಡಿ ಎತ್ತರದ ತೇರು ನೋಡ ನೋಡುತ್ತಿದಂತೆ ಧರೆಗೆ ಉರುಳಿದ ಘಟನೆ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರನ್ನು ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಈ ತೇರು ಬ್ಯಾಲೆನ್ಸ್ ಕಳೆದುಕೊಂಡು ಉರುಳಿಬಿದ್ದಿದೆ. hತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ವಿಡಿಯೋ ನೋಡಿ…