Home ತಾಜಾ ಸುದ್ದಿ ನೆಹರು ಕಡೆಗಣನೆ: ಸಿಎಂಗೆ ಪತ್ರ ಬರೆದ ಡಿಕೆಶಿ

ನೆಹರು ಕಡೆಗಣನೆ: ಸಿಎಂಗೆ ಪತ್ರ ಬರೆದ ಡಿಕೆಶಿ

0

ಸ್ವಾತಂತ್ರ್ಯ ಅಮೃತ ಮಹೋತ್ಸವ ಕುರಿತ ಸರ್ಕಾರಿ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಇಡೀ ದೇಶ ಸ್ವಾಂತಂತ್ರ್ಯ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ, ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ವಿಚಾರದಲ್ಲಿ ಅಧಿಕಾರರೂಢ ಸರ್ಕಾರದ ಜವಾಬ್ದಾರಿ ಒಂದು ಪಟ್ಟು ಹೆಚ್ಚಾಗಿಯೇ ಇರುತ್ತದೆ. ಆದರೆ, ಅ. 14ರಂದು ದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ ಎಂದಿದ್ದಾರೆ.

d k shivakumar

Exit mobile version