Home ಸುದ್ದಿ ದೇಶ ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಅಪರ್ಣಾ ನಾಯರ್​ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಅಪರ್ಣಾ ನಾಯರ್​ ಶವ ಪತ್ತೆ

0

ಮಲಯಾಳಂ ಖ್ಯಾತ ನಟಿ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶಪ ಪತ್ತೆಯಾಗಿದೆ. ತಿರುವನಂತಪುರಂ ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳು, ತಾಯಿ ಮತ್ತು ಸಹೋದರಿಯೊಂದಿಗೆ ಅಪರ್ಣಾ ವಾಸಿಸುತ್ತಿದ್ದರು. ನಿನ್ನೆ ಸಂಜೆ 7.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟೊತ್ತಿಗೆ ಅಪರ್ಣಾ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರೀಯರಾಗಿದ್ದ ಅಪರ್ಣಾ ಸಾಕಷ್ಟು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

Exit mobile version