ನೇಪಾಳ: 19 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.
ನೇಪಾಳದ ರಾಷ್ಟ್ರ ರಾಜಧಾನಿ ಕಾಠ್ಮಂಡುವಿನಲ್ಲಿರುವ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ವೇಳೆ ಶೌರ್ಯ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಟೇಕ್ ಆಫ್ ಆಗುತ್ತಿದ್ದ ವಿಮಾನದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ವಿಮಾನ ಪತನಗೊಂಡಿತ್ತು. ಈ ದುರ್ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.