ವಿಜಯಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ನಮ್ಮ ಪೂರ್ವಿಕರು ಸುಮಾರು 600 ವರ್ಷಗಳಿಂದ ವಾಸವಾಗಿದ್ದಾರೆ
ವಿಜಯಪುರ: ವಿಜಯಪುರ ಜಿಲ್ಲೆಯನ್ನು ನೋಡಲ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿರುವುದಾಗಿ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿರುವ ಅವರು ರಾಜ್ಯಸಭೆಗೆ ಸದಸ್ಯೆಯಾಗಿ ದೇಶದ ಯಾವುದೇ ಜಿಲ್ಲೆಯನ್ನು ಬೇಕಾದರೂ ನೋಡಲ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಬಹುದಿತ್ತು. ಆದರೆ, ನಾನು ಕರ್ನಾಟಕದವಳು, ಕನ್ನಡತಿ ಎಂಬ ಹೆಮ್ಮೆ, ಅಭಿಮಾನ ಇರುವುದರಿಂದ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದ್ದೇನೆ, ವಿಜಯಪುರ ಜಿಲ್ಲೆಯ ಮೇಲೆ ವಿಶೇಷ ಪ್ರೀತಿ ಇರುವುದರಿಂದ ನೋಡಲ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು ಅವಿಭಜಿತ ವಿಜಯಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ನಮ್ಮ ಪೂರ್ವಿಕರು ಸುಮಾರು 600 ವರ್ಷಗಳಿಂದ ವಾಸವಾಗಿದ್ದಾರೆ. ಹೀಗಾಗಿ ವಿಜಯಪುರ ಜಿಲ್ಲೆಯೊಂದಿಗೆ ಭಾವನಾತ್ಮಕ ಸಂಬಂಧ ಇದೆ ಎಂದರು.