ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

0
11

ಮೈಸೂರು: ಖ್ಯಾತ ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿ ಹೆಡಿಗ್ಗೊಂಡ ಅವರಿಗೆ 2024-25ರ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಕಟವಾಗಿದೆ.
ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿ ಹೆಡಿಗ್ಗೊಂಡ ಅವರಿಗೆ, ಈ ಬಾರಿಯ ದಸರಾ ಮಹೋತ್ಸವದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅಕ್ಟೋಬರ್ 3ರಂದು ಆರಂಭವಾಗುವ ದಸರಾ ಮಹೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅರಮನೆ ಮುಂಭಾಗ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Previous articleಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ
Next articleಹೊಸ ಪಕ್ಷ ಆರಂಭಿಸಿದ ಪ್ರಶಾಂತ್‌ ಕಿಶೋರ್‌