ಪಕ್ಷದ ಬೆಳವಣಿಗೆಗಳಿಂದ ಬೇಸರವಾಗಿದೆ

0
22

ಧಾರವಾಡ: ಬಿಜೆಪಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಬೇಸರ ಮೂಡಿಸುವಂಥವು ಎಂದು ವಿಧಾನ ಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷದಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷದ ಒಳಿತಿಗೆ ಪೂರಕವಾಗಿಲ್ಲ. ಪಕ್ಷದಲ್ಲಿನ ಬೆಳವಣಿಗೆಗಳನ್ನು ಹೈಕಮಾಂಡ್ ವೀಕ್ಷಿಸುತ್ತಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆಯಿದೆ ಎಂದರು.
ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮದವರ ಮುಂದೆ ಚರ್ಚಿಸುವುದು ಸಮರ್ಪಕವಲ್ಲ. ಪಕ್ಷದ ರಾಷ್ಟ್ರೀಯ ಮುಖಂಡರು ದೆಹಲಿ ಚುನಾವಣೆಯಲ್ಲಿ ನಿರತರಾಗಿದ್ದು, ಕೂಡಲೇ ಅಗತ್ಯ ಕ್ರಮಕೈಗೊಳ್ಳುವ ಭರವಸೆಯಿದೆ. ಅದಕ್ಕಾಗಿಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್‌ಪ್ರಕಾಶ ನಡ್ಡಾ ಅವರು ಶ್ರೀರಾಮುಲು ಅವರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಸಲಹೆ ನೀಡಿದ್ದಲ್ಲದೇ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

Previous articleಗಣರಾಜ್ಯೋತ್ಸವಕ್ಕಾಗಿ ನಮ್ಮ ಮೆಟ್ರೋ ಸಮಯದಲ್ಲಿ ಬದಲಾವಣೆ
Next articleಶಿರಡಿ ಸಾಯಿ ದರ್ಶನ ಪಡೆದ ಪವಿತ್ರಾ