ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

0
24

ಬೆಂಗಳೂರು: ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕೃತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸುತ್ತೇನೆ ಎಂದು ಹೇಳಿದರು.
ಇದರಿಂದ ಧಾರವಾಡ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರಿಗೆ ದೊಡ್ಡ ಸವಾಲು ಎದುರಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯುತ್ತಿದೆ.

Previous articleಕೊಳಗಲ್ಲು ಗ್ರಾಮದಲ್ಲಿ ಗುಂಪು ಘರ್ಷಣೆ: ನಿಷೇಧಾಜ್ಞೆ ಜಾರಿ
Next articleಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ