Home News ಪಕ್ಷ ವಿರೋಧಿ ಚಟುವಟಿಕೆ: S.T ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ: S.T ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಪಕ್ಷದ ಹೈಕಮಾಂಡ್‌ ಉಚ್ಛಾಟನೆಯ ನೋಟೀಸ್‌ ಕಳುಹಿಸಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಈ ತಿಂಗಳ ಆರಂಭದಲ್ಲಿ ಈ ಕುರಿತು ಮಾತನಾಡಿದ್ದ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು.

Exit mobile version