ಬೆಂಗಳೂರು: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಈ ಕುರಿತಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯೇಕ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ ಎಂದಿದ್ದಾರೆ.