ಪತ್ರ ಬರೆದ ತಕ್ಷಣ ಪಾಸ್​​ಪೋರ್ಟ್​ ರದ್ದಾಗಬೇಕು ಎಂದರೆ ಹೇಗೆ?

0
10

ಕಲಬುರಗಿ: ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತಕ್ಷಣ ಪಾಸ್​​ಪೋರ್ಟ್​ ರದ್ದಾಗಬೇಕು ಎಂದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಆದರೆ, ನನ್ನ ಪ್ರಶ್ನೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಈವರೆಗೆ ಉತ್ತರಿಸಿಲ್ಲ. ಪ್ರಜ್ವಲ್ ಪೆನ್​ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಆದರೆ, ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು ಏಪ್ರಿಲ್ 27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದಾರಾ ಎಂದು ಜೋಶಿ ಮತ್ತೊಮ್ಮೆ ಪ್ರಶ್ನಿಸಿದರು. ಪ್ರಜ್ವಲ್ ಅವರನ್ನು ವಿದೇಶದಿಂದ ವಾಪಸ್ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ಕಾನೂನು ಪ್ರಕಾರ ಅಗತ್ಯ ಪ್ರಕ್ರಿಯೆಗಳನ್ನು ಅನುಸರಿಸಿ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದರು.

Previous articleಪ್ರಧಾನಿ ಹುದ್ದೆಗೆ ಅರ್ಹರಾದವರು ರಾಜ್ಯದಲ್ಲಿ ಅನೇಕರಿದ್ದಾರೆ
Next articleಶಾಲೆಗೆ ಮಕ್ಕಳನ್ನು ಸೇರಿಸುವ ಮುನ್ನ…