Home ನಮ್ಮ ಜಿಲ್ಲೆ ಉತ್ತರ ಕನ್ನಡ ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

0

ಕಾರವಾರ: ಪದ್ಮಶ್ರೀ ತುಳಸಿ ಗೌಡ ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ತುಳಸಿ‌ ಗೌಡ ಅವರು ನಿನ್ನೆ ಆಕಸ್ಮಿಕವಾಗಿ ಅನಾರೋಗ್ಯಕ್ಕೊಳಗಾಗಿದ್ದು, ತೀರಾ ಆರೋಗ್ಯ ಹದಗೆಟ್ಟು ಅಸ್ವಸ್ಥರಾಗಿದ್ದರು. ಇಂದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಮಾಧವ ನಾಯಕರು, ಅವರನ್ನು ಜಿಲ್ಲಾ ಆಸ್ಪತ್ರೆಯ ಐ. ಸಿ ಯುನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.

ಶಾಸಕ ಸತೀಶ್ ಸೈಲ್ ಮತ್ತು ಶ್ರೀಮತಿ ಡಾ. ಅಂಜಲಿ ನಿಂಬಾಳ್ಕರ್ ಅವರು ಕೂಡ ವಿಷಯ ತಿಳಿದು ತುಳಸಿ ಗೌಡರ ಆರೋಗ್ಯ ವಿಚಾರಿಸಿದ್ದು, ವೈದ್ಯರಿಂದ ಮಾಹಿತಿ ಪಡೆದು ಉತ್ತಮ ವೈದ್ಯಕೀಯ ಔಷಧೋಪಚಾರ ಮಾಡುವಂತೆ ಸೂಚಿಸಿದ್ದಾರೆ.

Exit mobile version