ನವದೆಹಲಿ: ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿ 2026ಕ್ಕೆ ನಾಮನಿರ್ದೇಶನ ಇಂದಿನಿಂದ ಪ್ರಾರಂಭವಾಗಿವೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮ ಪ್ರಶಸ್ತಿಗಳು-ನಾಮನಿರ್ದೇಶನಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಾಮಾಜಿಕ ಕಾರ್ಯ, ವಿಜ್ಞಾನ, ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ ಮತ್ತು ವ್ಯಾಪಾರ ಹಾಗೂ ಕೈಗಾರಿಕೆಗಳಂತಹ ಎಲ್ಲಾ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಗಳನ್ನು ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವುದು.