ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ನಿಧನರಾದರು.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.