ಪರಾರಿಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡು

0
36

ಶಿವಮೊಗ್ಗ : ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡದಿದೆ.
ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಹಬೀಬುಲ್ಲಾನ ಬಲಗಾಲಿನ ಪಾದಕ್ಕೆ ಗುಂಡು ತಗುಲಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Previous articleಲಂಡನ್‌ನಲ್ಲಿನ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದ ಮಳೆ ಹುಡುಗಿ ಪೂಜಾ ಗಾಂಧಿ
Next articleಸಮಸ್ಯೆಗಳ ಮೂಟೆ ಹೊತ್ತ ಗ್ರಾಮಗಳಿಗೆ ಪುರಸ್ಕಾರ.!