ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ

0
13

ನವದೆಹಲಿ: ಕಾಂಗ್ರೆಸ್‌ ವಿಧಾನ ಪರಿಷತ್‌ ಸ್ಥಾನವನ್ನು ನೀಡಿದೆ. ಈಗ ಬಿಜೆಪಿ ಸೇರಿದ್ದರಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದ್ದಾರೆ.
ಮೇಲ್ಮನೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಜತೆ ಮಾತನಾಡಿದ್ದೇನೆ. ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಈಮೇಲ್‌ ಕಳುಹಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೆನೆ, ಕಾರ್ಯಕರ್ತರ ಇಚ್ಛೆಯಂತೆ ಬಿಜೆಪಿ ಸೇರಿದ್ದೇನೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲ ತುಂಬುವುದಕ್ಕಾಗಿ ಬಿಜೆಪಿ ಸೇರಿದ್ದೇನೆ ಎಂದು ಜಗದೀಶ್ ಶೆಟ್ಟರ್‌ ಹೇಳಿದ್ದಾರೆ.

Previous articleಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ
Next articleಕರ್ನಾಟಕಕ್ಕೆ ಹೆಚ್ಚುವರಿ ಪ್ರಾದೇಶಿಕ ಕಚೇರಿ