Home ಅಪರಾಧ ಪರೀಕ್ಷೆಯಲ್ಲಿ ಅನುತ್ತೀರ್ಣ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಅನುತ್ತೀರ್ಣ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

0

ಮಂಡ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಖಿತ್(15)‌ ಎನ್ನುವ ವಿದ್ಯಾರ್ಥಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫಲಿತಾಂಶ ನೋಡಲೆಂದು ಶಾಲೆಗೆ ತೆರಳಿದ್ದ ಲಿಖಿತ್‌ನಿಗೆ ಎರಡು ವಿಷಯದಲ್ಲಿ ಅನುತ್ತೀರ್ಣಗೊಂಡಿರುವುದಾಗಿ ಶಿಕ್ಷಕರು ಹೇಳಿ ಸಮಾಧಾನಪಡಿಸಿ ಮನಗೆ ಕಳಿಸಿದ್ದಾರೆ. ಆದರೆ ಫಲಿತಾಂಶದಿಂದ ಬೇಸತ್ತು ಹೊಲಕ್ಕೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಲಿಖಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Exit mobile version