Home News ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಬೆಂಗಳೂರು: ರೈಲ್ವೆ ನೇಮಕಾತಿ ಸೂಪರಿಂಟೆಂಡೆಂಟ್ ಮಂಡಳಿಯ ನರ್ಸಿಂಗ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು. ವಿದ್ಯಾಕೇಂದ್ರ ಈ ಪರೀಕ್ಷಾ ಕೇಂದ್ರ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಂಗಳಸೂತ್ರ, ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಪ್ರವೇಶ ಪತ್ರದಲ್ಲಿ ಸೂಚನೆ ನೀಡಿತ್ತು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇನ್ನು ಈ ಕುರಿತಂತೆ ಸಚಿವ ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಎಂದಿದ್ದಾರೆ.

Exit mobile version