Home ತಾಜಾ ಸುದ್ದಿ ಪವನ್‌ಗೆ ಶುಭ ಹಾರೈಸಿದ ಬಿ.ವೈ.ರಾಘವೇಂದ್ರ

ಪವನ್‌ಗೆ ಶುಭ ಹಾರೈಸಿದ ಬಿ.ವೈ.ರಾಘವೇಂದ್ರ

0

ಶಿವಮೊಗ್ಗ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಪವನ್‌ಗೆ ಸಂಸದ ಬಿ.ವೈ.ರಾಘವೇಂದ್ರ ಶುಭ ಹಾರೈಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಶಿಕಾರಿಪುರದ ಕುಮುದ್ವತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯಾದ ಎಂ.ಎಸ್. ಪವನ್ ಅವರು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು, ಸುದ್ದಿ ತಿಳಿದ ತಕ್ಷಣ ಪ್ರತಿಭಾನ್ವಿತ ವಿದ್ಯಾರ್ಥಿಗೆ ಸಿಹಿ ತಿನ್ನಿಸಿ ಅಭಿನಂದಿಸಿ ಮುಂದಿನ ಶೈಕ್ಷಣಿಕ ಪಯಣಕ್ಕೆ ಹೃದಯ ತುಂಬಿ ಶುಭಕೋರಿದರು. ಈ ಅದ್ವಿತೀಯ ಸಾಧನೆ ಮಾಡುವ ಮೂಲಕ ನಮ್ಮ ಶಿಕ್ಷಣ ಸಂಸ್ಥೆಯ ಹೆಸರು ಮತ್ತು ಕೀರ್ತಿಯನ್ನು ರಾಜ್ಯದಾದ್ಯಂತ ವಿಸ್ತರಿಸಿ, ಸಂಸ್ಥೆಯ ಮೇಲೆ ಪೋಷಕರಿಗಿದ್ದ ವಿಶ್ವಾಸವನ್ನು ದ್ವಿಗುಣಗೊಳಿಸಿದ ಇವನ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಮತ್ತೊಮ್ಮೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

Exit mobile version