ಶ್ರೀರಂಗಪಟ್ಟಣ: ಪಟ್ಟಣದ ಪಶ್ಚಿಮ ವಾಹಿನಿ ಬಳಿ ಇರುವ ಕಾವೇರಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಎಸ್.ಎಂ. ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಲಾಯಿತು.
ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮ ಹಾಗೂ ಶ್ರೀ ಚಾಮುಂಡೇಶ್ವರಿ ದೇವಾಲಯದ ಅರ್ಚಕರಾದ ಲಕ್ಷ್ಮೀಶ ಅವರುಗಳ ನೇತೃತ್ವದಲ್ಲಿ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರಿಂದ ಕಾವೇರಿ ನದಿಗೆ ಪೂಜಾ ವಿಧಿ ವಿಧಾನದೊಂದಿಗೆ ಅಸ್ತಿ ವಿಸರ್ಜಿಸಲಾಯಿತು. ಈ ವೇಳೆ ಅವರ ಕುಟುಂಬ ಸದಸ್ಯರು ಹಾಗೂ ಆಪ್ತ ವಲಯದ ಮುಖ್ಯಸ್ಥರು ಪಾಲ್ಗೊಂಡಿದ್ದರು.