ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.