ಪಾಕ್ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ಘೋಷಣೆ

0
17

ಶ್ರೀನಗರ: ಇತ್ತೀಚೆಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಅಮಾಯಕರ ಜೀವಹಾನಿಯಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ ಹೇಖಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇತ್ತೀಚೆಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಅಮಾಯಕರ ಜೀವಹಾನಿಯಾಗಿದ್ದು, ತೀವ್ರ ನೋವುಂಟಾಗಿದೆ. ಜನರ ಕಷ್ಟವನ್ನು ದೂರ ಮಾಡಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಯಾವುದೇ ಪರಿಹಾರದಿಂದ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವವನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ ಅವರಿಗೆ ಬೆಂಬಲ ಮತ್ತು ಸಹಕಾರ ನೀಡುವ ಸಂಕೇತವಾಗಿ, ಮೃತಪಟ್ಟವರ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಃಖದ ಸಮಯದಲ್ಲಿ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದಿದ್ದಾರೆ.

Previous article24 ವಿಮಾನ ನಿಲ್ದಾಣಗಳಲ್ಲಿ ಮೇ 15ರವರೆಗೆ ನಾಗರಿಕ ವಿಮಾನ ಹಾರಾಟ ಬಂದ್
Next articleನಾಗರಿಕರನ್ನು ಗುರಿಯಾಗಿಸಿಕೊಂಡು ಮಾಡಿದ ದಾಳಿಗೆ ಪಾಕಿಸ್ತಾನ ಭಾರೀ ಬೆಲೆ ತೆರಬೇಕಾಗುತ್ತದೆ