ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು

0
29

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು ನೀಡಿದೆ.
ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಮಹತ್ವದ ಕ್ಯಾಬಿನೆಟ್‌ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು. ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದಿಗೆ ನಿರ್ಧಾರ. ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು. ಪಾಕ್ ಪ್ರಜೆಗಳಿಗೆ ವೀಸಾ ಕೊಡದಿರಲು ನಿರ್ಧಾರ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ ಚೆಕ್‌ಪೋಸ್ಟ್ ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತ ಸೇರಿದಂತೆ ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು ಸೇರಿ ಹಲವು ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ಬುಧವಾರ ತೆಗೆದುಕೊಂಡಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

Previous articleಹಿಂದೂಗಳ ಆಸ್ತಿಗೆ ಹಾನಿಯಾದರೆ, ಬಂದ್ ಕರೆ ಕೊಟ್ಟವರೇ ಹೊಣೆ
Next articleಕಾಂಗ್ರೆಸ್ಸಿಗರು ಯಾರಿಗೆ ಬೆಂಬಲ ಕೊಡುತ್ತಿದ್ದಾರೆ?; ವರಿಷ್ಠರು ತಮ್ಮವರಿಗೆ ಬುದ್ಧಿವಾದ ಹೇಳಲಿ