ಪಾಕ್ ಬಣ್ಣ ಬಯಲು ಮಾಡಲು ಸರ್ವಪಕ್ಷ ನಿಯೋಗ ರಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆ ವಿರುದ್ಧ ಭಾರತದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲು ಸರ್ವಪಕ್ಷ ನಿಯೋಗದ ತಂಡ ರಚನೆಯಾಗಿದೆ,
ಕಾಂಗ್ರೆಸ್ ಸಂಸದ ಶಶಿ ತರೂರ್​ ಸೇರಿದಂತೆ ವಿರೋಧ ಪಕ್ಷದ ಇಬ್ಬರು ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಲ್ವರು ಸೇರಿದಂತೆ ಆರು ಇತರ ಸಂಸದರನ್ನುಈ ನಿಯೋಗದಲ್ಲಿ ಹೆಸರಿಸಿದೆ, ಈ ಕುರಿತಂತೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಭಾರತದ “ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ಸಂದೇಶ”ವನ್ನು ಹೊತ್ತುಕೊಂಡು ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಪ್ರಮುಖ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ರಾಜಕೀಯವನ್ನು ಮೀರಿ, ಭಿನ್ನಾಭಿಪ್ರಾಯಗಳನ್ನು ಮೀರಿ ರಾಷ್ಟ್ರೀಯ ಏಕತೆಯ ಪ್ರಬಲ ಪ್ರತಿಬಿಂಬ ಇದು ಎಂದಿದ್ದಾರೆ. ಇನ್ನು ಈ ಸರ್ವಪಕ್ಷ ನಿಯೋಗದಲ್ಲಿ ಮಾಜಿ ರಾಜತಾಂತ್ರಿಕರಾಗಿರುವ ಶಶಿ ತರೂರ್, ಕೇಂದ್ರವು ವಿರೋಧ ಪಕ್ಷದ ನಾಯಕರಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದೆ ಕನಿಮೋಳಿ ಕರುಣಾನಿಧಿ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಪ್ರಮುಖರಾಗಿ ಕೆಲಸ ಮಾಡಲಿದ್ದಾರೆ. ಈ ನಿಯೋಗಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರನ್ನು ಭೇಟಿ ಮಾಡಲಿವೆ.

ವಿವಿಧ ಪಕ್ಷಗಳ ಸಂಸತ್ತಿನ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಪ್ರತಿಷ್ಠಿತ ರಾಜತಾಂತ್ರಿಕರು ಪ್ರತಿ ನಿಯೋಗದ ಭಾಗವಾಗಿರುತ್ತಾರೆ.

ಕೆಳಗಿನ ಸಂಸತ್ತಿನ ಸದಸ್ಯರು ನಿಯೋಗಗಳನ್ನು ಮುನ್ನಡೆಸುತ್ತಾರೆ:

1) ಶಶಿ ತರೂರ್, INC

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ