ಪಾದಯಾತ್ರೆ: ಸಂಜೆಯೊಳಗೆ‌ ನಿರ್ಧಾರ

0
45

ದಕ್ಷಿಣ ಕನ್ನಡ : ಸಾವಿರಾರು ಕೋಟಿಯ ಭ್ರಷ್ಟಾಚಾರ ಆಗಿದೆ. ನಮ್ಮ ಉದ್ದೇಶ ಈ ಬಿಸಿಯಲ್ಲೇ ಹೋರಾಟ ಆಗಬೇಕು ಅನ್ನೋದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪಾದಯಾತ್ರೆ ನಡೆಸಲು ಜೆಡಿಎಸ್​ನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಇದಕ್ಕೆ ನಮ್ಮ ಬೆಂಬಲವಿಲ್ಲ ಎಂದಿದ್ದರು ಎಂಬುದರ ಕುರಿತಾಗಿ ನಾನು ಇದನ್ನ ಮಾಧ್ಯಮದಲ್ಲಿ ನೋಡಿದ್ದೇನೆ, ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಮತ್ತೆ ಮಾತನಾಡುತ್ತೇನೆ ಎಂದರು. ನಾವು ಅನ್ಯಾಯ ಮಾಡಲ್ಲ ಎಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ, ಇಷ್ಟು ದೊಡ್ಡ ಹಗರಣ ಮಾಡಿ ಜನರ ಹಣವನ್ನು ಲೂಟಿ ಮಾಡಿದ್ದಾರೆ. ಸದನದ ಒಳಗೂ ಎಲ್ಲರ ಜೊತೆಗೂ ಮಾತನಾಡಿ ಕಾಂಗ್ರೆಸ್​ನವರು ಬಾಯಿ ಮುಚ್ಚೋ ರೀತಿಯಲ್ಲಿ ಹೋರಾಟ ಆಗಿದೆ. ಜೆಡಿಎಸ್ ಕೂಡ ಎನ್​ಡಿಎ ಭಾಗ, ಹೀಗಾಗಿ ಅವರು ಹೋರಾಟದಲ್ಲಿ ಒಟ್ಟಿಗೆ ಇರಬೇಕು. ನಾನು ಕುಮಾರಸ್ವಾಮಿ ಜೊತೆ ಮಾತನಾಡಿ ಸಂಜೆಯೊಳಗೆ‌ ನಿರ್ಧಾರಕ್ಕೆ ಬರುತ್ತೆವೆ ಎಂದು ಹೇಳಿದರು.

Previous articleವಯನಾಡ್‌ ದುರಂತ: ಭೂಕುಸಿತದ ಬಗ್ಗೆ ಮೊದಲೇ ಮುನ್ನೆಚ್ಚರಿಕೆ ನೀಡಲಾಗಿತ್ತು…
Next articleಮೊದಲು ಪ್ರಶ್ನೆ ಮಾಡಬೇಕಾಗಿರುವುದು ಯಾರನ್ನು?