ಬೆಂಗಳೂರು:ಕೆರೆ ಒತ್ತುವರಿಗಳನ್ನು ತೆರವುಗೊಳಿಸುವುದು, ಕೆರೆಗಳ ಹೂಳು ತೆಗೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಲಮೂಲಗಳನ್ನು ಉಳಿಸುವ ಹಾಗೂ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಹೆಜ್ಜೆಗಳನ್ನಿಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿಯ ತಮ್ಮಡಹಳ್ಳಿ ಗ್ರಾಮದ ಬೀರೇಶ್ವರ ದೇವಾಲಯದ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಲ್ಯಾಣಿ ಅಭಿವೃದ್ಧಿ ಪಡಿಸಲಾಗಿದೆ. ಜಲ ಸುಸ್ಥಿರತೆಗಾಗಿ ಹಿರಿಯರು ನಿರ್ಮಿಸಿದ ಯಾವುದೇ ರಚನೆಗಳನ್ನು ಉಳಿಸುವ ಹೊಣೆ ನಮ್ಮೆಲ್ಲರದ್ದಾಗಬೇಕು ಎಂದಿದ್ದಾರೆ.