ಪಾವಗಡ ಸೋಲಾರ್ ಪಾರ್ಕ್‌ಗೆ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಭೇಟಿ

0
23

ಪಾವಗಡ: ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗ ಬುಧವಾರ ಪಾವಗಡದ ಸೋಲಾರ್ ಪಾರ್ಕ್‌ಗೆ ಭೇಟಿ ನೀಡಿತು.
ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಒಳಗೊಂಡಂತೆ ಶಾಸಕ ಯು.ಬಿ. ಬಣಕಾರ್, ಡಿ.ಜಿ. ಶಾಂತನಗೌಡ, ಹೆಚ್.ವಿ. ವೆಂಕಟೇಶ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಭಾರತಿ ಶೆಟ್ಟಿ ಅವರಿದ್ದ ನಿಯೋಗಕ್ಕೆ ಅಧಿಕಾರಿಗಳು ಪಾರ್ಕ್‌ನ ವೈಶಿಷ್ಟ್ಯತೆಗಳ ಬಗ್ಗೆ ವಿವರ ನೀಡಿದರು.
ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಮಾತನಾಡಿ, ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾವಗಡದ ಸೋಲಾರ್ ಪಾರ್ಕ್ ಮಾದರಿಯಾಗಿದೆ. ಇದೇ ರೀತಿ ರಾಜ್ಯದ ಬೇರೆ ಭಾಗದಲ್ಲೂ ಬೃಹತ್ ಸೋಲಾರ್ ಪಾರ್ಕ್ ಅಭಿವೃದ್ಧಿಯಾಗಬೇಕು ಎಂದರು.

Previous articleರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಇಲ್ಲ
Next articleಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಬಿ.ಎಸ್. ಪಾಟೀಲ್ ಭೇಟಿ ನೀಡಿ ಪರಿಶೀಲನೆ