Home News ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟ ಸರ್ಕಾರ

ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟ ಸರ್ಕಾರ

ಬೆಂಗಳೂರು: ಆಲಿಸುವ ಸರ್ಕಾರ ಎನ್ನುತ್ತಾ ಸರ್ಕಾರ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ “ಪ್ರವಚನ” ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಯನವರು ಈಗ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದ್ದಾರೆ.ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ ಈಗ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ. 21.87 ಲಕ್ಷ ವೃದ್ಧಾಪ್ಯ ಹಾಗೂ 31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಈ ಸರ್ಕಾರ ಮುಂದಾಗಿದ್ದು, 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್‌ಗಳನ್ನು ರದ್ದು ಮಾಡುವುದಕ್ಕೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ ನೀಡಲಾಗಿದೆ. ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ.‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ? ಎಂದಿದ್ದಾರೆ.

Exit mobile version