Home ತಾಜಾ ಸುದ್ದಿ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಪಿಎಸ್ಐ ಪರೀಕ್ಷೆ ಮುಂದೂಡಿಕೆ

0

ಬೆಂಗಳೂರು: PSI ಹುದ್ದೆಗಳ ನೇಮಕಾತಿಗೆ ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
402 PSI ಹುದ್ದೆಗಳ ನೇರ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಹೊರಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Exit mobile version