ಪಿಕಪ್ ಚಾಲಕನ ಬರ್ಬರ ಹತ್ಯೆ

0
37
ಕೊಲೆ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಕೊಲೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Previous articleನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ
Next articleIPL 2025ರ ಫೈನಲ್​ನಲ್ಲಿ ‘ಆಪರೇಷನ್ ಸಿಂದೂರ’ ವಿಜಯೋತ್ಸವ