Home ತಾಜಾ ಸುದ್ದಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ

ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ

0

ಬೆಂಗಳೂರು: ಬಸ್ ದರ ಏರಿಕೆಗೆ ಹೊಸ ಆಯೋಗ, ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ವಿರೋಧಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದಿದ್ದಾರೆ

Exit mobile version