ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

0
8

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು.
ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು, 2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು.
ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಗದಗ ಜಿಲ್ಲೆ ಅಂತಿಮ ಸ್ಥಾನದಲ್ಲಿ ಇದೆ, ಉಡುಪಿ ಎರಡನೇ ಸ್ಥಾನದಲ್ಲಿದ್ದು, ಧಾರವಾಡ ಜಿಲ್ಲೆ 23ನೇ ಸ್ಥಾನದಲ್ಲಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ  ಬಾಲಕಿಯರೇ (84.87%) ಮೇಲುಗೈ ಸಾಧಿಸಿದ್ದಾರೆ.

Previous articleದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
Next articleಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598