ಪಿಯುಸಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆ

ಆತ್ಮಹತ್ಯೆ

ಬಳ್ಳಾರಿ: ದ್ವಿತೀಯ ಪಿಯುಸಿಯಲ್ಲಿ ಫೇಲಾಗಿರುವುದಕ್ಕೆ ನೊಂದುಕೊಂಡ ವಿದ್ಯಾರ್ಥಿನಿ ವಿಜಯಲಕ್ಷ್ಮೀ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ವಿದ್ಯಾರ್ಥಿನಿಯಾಗಿದ್ದು, ಸಿರುಗುಪ್ಪದ ವಿಕೆಜಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದಳು. ವಾಣಿಜ್ಯ ವಿಭಾಗದಲ್ಲಿ ಅಭ್ಯಸಿಸುತ್ತಿದ್ದ ಈಕೆ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.