ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ : ಎಫ್‌ಐಆರ್ ದಾಖಲು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಪುನೀತ್‌ ಕೆರೆಹಳ್ಳಿಗೆ ಜೀವ ಬೆದರಿಕೆ ಕೊಲೆ ಬೆದರಿಕೆ ಹಾಕಲಾಗಿದೆ, ಈ ಕುರಿತಂತೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ‘NEXT YOU’ ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿಯು, ವಾಟ್ಸಾಪ್ ಕಾಲ್ ಹಾಗೂ ವಿಡಿಯೋ ಕಾಲ್ ಮೂಲಕವೂ ನಿರಂತರವಾಗಿ ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.