Home ತಾಜಾ ಸುದ್ದಿ ಪೊಲೀಸರೇ ಹಲ್ಲೆ ಮಾಡಿದ್ದಾರೆ: ಸ್ವಾಮೀಜಿ ಗಂಭೀರ ಆರೋಪ

ಪೊಲೀಸರೇ ಹಲ್ಲೆ ಮಾಡಿದ್ದಾರೆ: ಸ್ವಾಮೀಜಿ ಗಂಭೀರ ಆರೋಪ

0

ಬೆಳಗಾವಿ: ಪಂಚಮಸಾಲಿ ಸಮುದಾಯ 2A ಮೀಸಲಾತಿಗಾಗಿ ನಡೆಸಿದ ಹೋರಾಟ ಮಂಗಳವಾರ ಹಿಂಸಾರೂಪಕ್ಕೆ ತಿರುಗಿದ್ದು, ಈ ವೇಳೆ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಹಲ್ಲೆ ಮಾಡಿದ್ದರು. ದ್ವೇಷದಿಂದ ಕಲ್ಲು ಹೊಡೆಯುವ ಕೆಲಸವನ್ನು ಮಾಡಿದ್ದಾರೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ನಮ್ಮವರ ಮೇಲೆ ಪೊಲೀಸರೇ ಕಲ್ಲುತೂರಾಟ ಮಾಡಿದ್ದಾರೆ. ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

Exit mobile version