ಪೊಲೀಸರ ಥಳಿತಕ್ಕೆ ಯುವಕ ಸಾವು ಆರೋಪ: ಶಾಸಕ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ

0
14

ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ವೀರೇಶ ಎನ್ನುವ ಯುವಕ ಪೊಲೀಸರ ಥಳಿತದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಗರದ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಪಿಐ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ನಗರದ ಶಾಸಕ ಡಾ. ಶಿವರಾಜ ಪಾಟೀಲ್ ಹಾಗೂ ಮೃತನ ಕುಟುಂಬದ ಸದಸ್ಯರು, ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು.

Previous articleಕೃಷಿ ಹೊಂಡದಲ್ಲಿ ಮುಳಗಿ ಇಬ್ಬರು ಯುವಕರು ಸಾವು
Next article13 ಜಿಲ್ಲೆಗಳಲ್ಲಿ 4 ದಿನ ಮಳೆ: ಕೆಲವೆಡೆ ಯಲ್ಲೋ ಅಲರ್ಟ್