ಪೊಲೀಸರ ಮೇಲೆ ಹಲ್ಲೆ: ಮಾಜಿ ಶಾಸಕನ ಪುತ್ರ ಅರೆಸ್ಟ್

0
9

ಶಿರಸಿ: ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮಾಜಿ ಶಾಸಕ ವಿ.ಎಸ್. ಪಾಟೀಲ್ ಪುತ್ರ ಬಾಪುಗೌಡ ಪಾಟೀಲ್ ಎಂಬಾತನನ್ನು ಶನಿವಾರ ತಡರಾತ್ರಿ ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಸರಳ, ಸಜ್ಜನ ರಾಜಕಾರಣಿಯಾಗಿ ಕ್ಷೇತ್ರದಾದ್ಯಂತ ಹೆಸರು ಗಳಿಸಿರುವ ಮಾಜಿ ಶಾಸಕ ವಿ.ಎಸ್. ಪಾಟೀಲ್, ಈ ಮೊದಲೇ ಮಗನ ನಡವಳಿಕೆಯ ಕುರಿತು ಸಾರ್ವಜನಿಕವಾಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು‌.
ಕಳೆದ 6 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೇ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ 15 ಜನರ ಜತೆ ಸೇರಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಎಂಬುವವರಿಗೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪದ ಜೊತೆ ಎರಡು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಮುಂಡಗೋಡ ಜೆಎಂ‌ಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Previous articleಜಾಗೃತಿಗಾಗಿ ಡ್ರಾಮಾ ಮಾಡಿದ ಪೂನಂ
Next article42 ಸಿಮ್‌ ಖರೀದಿಸಿದ ಅಪ್ರಾಪ್ತ ಸೇರಿ ಐವರ ಬಂಧನ