Home ಸುದ್ದಿ ದೇಶ ಪೊಲೀಸ್​​ಗೆ ಕಪಾಳ ಮೋಕ್ಷ ಮಾಡಿದ ಬಿಜೆಪಿ ಶಾಸಕನ ವಿಡಿಯೋ ವೈರಲ್

ಪೊಲೀಸ್​​ಗೆ ಕಪಾಳ ಮೋಕ್ಷ ಮಾಡಿದ ಬಿಜೆಪಿ ಶಾಸಕನ ವಿಡಿಯೋ ವೈರಲ್

0

ಮಹಾರಾಷ್ಟ್ರದ ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಶಾಸಕ ಸುನೀಲ್ ಕಾಂಬ್ಳೆ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ಶುಕ್ರವಾರ (ಜನವರಿ 5) ನಡೆದ ಟ್ರಾನ್ಸ್‌ಜೆಂಡರ್ ವಾರ್ಡ್‌ನ ಉದ್ಘಾಟನಾ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಅವರು ವೇದಿಕೆಯಿಂದ ಕೆಳಗಿಳಿಯುವಾಗ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದರು. ಇನ್ನು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ ಸುನೀಲ್ ಕಾಂಬಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಪುಣೆ ಪೊಲೀಸ್‌ನ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಶಾಸಕನ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯದಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್​​ಗೆ ಕಪಾಳ ಮೋಕ್ಷ ಮಾಡಿದ ಬಿಜೆಪಿ ಶಾಸಕನ ವಿಡಿಯೋ ವೈರಲ್

Exit mobile version