ಪೊಲೀಸ್ ಕ್ವಾಟ್ರಸ್‌ನಲ್ಲೇ ಮಹಿಳಾ ಕಾನ್‌ಸ್ಟೆಬಲ್ ಆತ್ಮಹತ್ಯೆ

0
27

ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಕಾಪು ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಜ್ಯೋತಿ, ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.ಮೃತ ಪೊಲೀಸ್‌ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಬೆಳಕಿಗೆ ಬಂದಿದೆ. ಮೃತರ ಕುಟುಂಬಸ್ಥರು ಆಕೆಯ ಹುಟ್ಟೂರಾದ ಬಾಗಲಕೋಟೆಯಿಂದ ಆಗಮಿಸಿದ ನಂತರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Previous articleಚುನಾವಣಾ ಸಮಯದಲ್ಲಿ ಗೊಂದಲ ಸಹಜ
Next articleಮೈಕೋ ಸಿಗ್ನಲ್‌ನಿಂದ ಆನಪಾಳ್ಯ ಜಂಕ್ಷನ್‌ವರೆಗೆ ಸಂಚಾರ ಬಂದ್