ದಾವಣಗೆರೆ: ಕೆಲಸದ ಒತ್ತಡ ನಡುವೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ , ಹಿರಿಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಮಹಿಳಾ ಸಿಬ್ಬಂದಿಗಳೊಂದಿಗೆ ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ನಗರದ ಜಿಲ್ಲಾ ಕವಾಯತ್ ಮೈದಾನದಲ್ಲಿ ಮಂಗಳವಾರ ಬೆಳಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಹೋಳಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಸಿಬ್ಬಂದಿಗಳಿಗೆ ಬಣ್ಣ ಹಚ್ಚುವ ಮೂಲಕ ಡಿಜೆಯಿಂದ ಹೊರ ಹೊಮ್ಮುತ್ತಿದ್ದ ಹಾಡುಗಳಿಗೆ ನೃತ್ಯ ಮಾಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಇಟ್ನಾಳ್ ಕೂಡ ಹೋಳಿ ಹಬ್ಬದಲ್ಲಿ ಪಾಲ್ಗೊಂಡು ಪೋಲೀಸ್ ಸಿಬ್ಬಂದಿಗಳೊಂದಿಗೆ ಹೋಳಿ ಹಬ್ಬ ಆಚರಣೆ ಮಾಡಿದರು.