ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

0
18

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಅವರು, 2009ರಿಂದ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ಶಾಖೆ, ಚುನಾವಣೆ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

2019ರಲ್ಲಿ ಮುಖ್ಯಮಂತ್ರಿ ಪದಕ ಪಡೆದಿದ್ದರು. ಏಳು ವರ್ಷಗಳ ಹಿಂದೆ ಇವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಪೊಲೀಸ್ ಕರ್ತವ್ಯ ಕೂಟದಲ್ಲಿ ಎರಡು ಬಾರಿ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿದ್ದರು.

Previous articleಕರುನಾಡಿನ  9 ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಅಭಿನಂದನೆ
Next articleಗಣರಾಜ್ಯೋತ್ಸವದ ಸಂದರ್ಭದಲ್ಲಿ ಅವಘಡ