Home ಅಪರಾಧ ಪೋಕ್ಸೋ ಪ್ರಕರಣದಲ್ಲಿ ಓರ್ವನ ಬಂಧನ

ಪೋಕ್ಸೋ ಪ್ರಕರಣದಲ್ಲಿ ಓರ್ವನ ಬಂಧನ

0

ಹುಬ್ಬಳ್ಳಿ: ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಶರಾವತಿ ನಗರದ ಕೆಇಬಿ ಲೇಔಟ್‌ನ ನಿವಾಸಿ ಅಸ್ಪಾಕ್ ಜೋಗನ್(೩೮) ಎಂಬಾತನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸುದ್ದಿಗಾರರೊಂದಿಗೆ ಮಾಹಿತಿ ನೀಡಿ, ಶರಾವತಿ ನಗರದ ಕೆಇಬಿ ಲೇಔಟ್ ನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಆರೋಪಿಯು ಕಸಬಾಪೇಟ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಬಾಲಕಿಗೆ ತಂದೆ ತಾಯಿ ಇಲ್ಲ. ಬಾಲಕಿಗೆ ಹಣ ಹಾಗೂ ಇನ್ನಿತರ ವಸ್ತುಗಳ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡಿರುವುದು ತನಿಖೆಯ ವೇಳೆ ತಿಳಿದು ಬಂದಿದೆ ಎಂದು ತಿಳಿಸಿದರು.

ಸದ್ಯ ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿ, ಹೆಚ್ಚಿನ ವಿಚಾರಣೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಸುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳ ಪರಶೀಲಿಸಿದ್ದು, ಇದೇ ರೀತಿ ಇನ್ನೂ ಅನೇಕ ಯುವತಿಯರೊಂದಿಗೆ ಅಶ್ಲೀಲ ವಿಡಿಯೋ, ಫೋಟೋಗಳ ತೆಗೆದುಕೊಂಡಿರುವುದು ಲೈಂಗಿಕ ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ನೊಂದ ಯುವತಿಯರು ದೂರು ನೀಡಿದರೆ,ತಕ್ಷಣ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಹೇಳಿದರು.

Exit mobile version