ಪೋಕ್ಸೋ ಪ್ರಕರಣ​: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

0
82

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.
ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ 2025ರ ಮಾರ್ಚ್​ 15ರಂದು ಖುದ್ದು ವಿಚಾರಣೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ಸಮನ್ಸ್​ ರದ್ದತಿಗೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್.ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್ ತಡೆ ನೀಡಿದೆ. ಹಾಗೇ, ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾಯಾಲಯ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

Previous articleಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಪತ್ರ
Next articleಮುಂಬೈ-ಅಮರಾವತಿ ಎಕ್ಸ್‌ಪ್ರೆಸ್‌ಗೆ ಟ್ರಕ್ ಡಿಕ್ಕಿ