ಹಾಸನ: ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ, ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ. ಕೂಡಲೆ ಆಕೆಯನ್ನು ಪೊಲೀಸರು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಇನ್ನು ಪೊಲೀಸರು ಆರೋಪಿ ಲೋಕನಾಥ್‌ನನ್ನು ವಶಕ್ಕೆ ಪಡೆದಿದ್ದಾರೆ.